TSK

TSK · ಯಾಜಕಕಾಂಡ 7:9

مراجع Treasury of Scripture Knowledge في ಕನ್ನಡ IRV.

العودة إلى المقطع

ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.

ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.

¶ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.

ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?

¶ ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.