TSK

TSK · ಯಾಜಕಕಾಂಡ 8:23

مراجع Treasury of Scripture Knowledge في ಕನ್ನಡ IRV.

العودة إلى المقطع

ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ, ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲು ಚಿಮುಕಿಸಬೇಕು.

ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.

ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.

ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.

ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,

ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.

ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.

ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.