TSK

TSK · ಯಾಜಕಕಾಂಡ 8:7

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.

¶ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು.

ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.

ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.