ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
TSK
TSK · ಲೂಕನು 1:15
مراجع Treasury of Scripture Knowledge في ಕನ್ನಡ IRV.
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,
ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.
ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.
ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.
ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.
‹ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು”› ನಿಮಗೆ ಹೇಳುತ್ತೇನೆ.
‹ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.›
¶ ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,