TSK

TSK · ಲೂಕನು 1:42

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.

ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.

ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.

ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,

ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;