¶ ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
TSK
TSK · ಲೂಕನು 1:6
مراجع Treasury of Scripture Knowledge في ಕನ್ನಡ IRV.
¶ ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.
¶ ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.
“ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?
ಆಗ ಆತನು ಅವರಿಗೆ ಹೇಳಿದ್ದೇನಂದರೆ, ‹“ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.›
ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.
¶ ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.
ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
¶ ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.