ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.
TSK
TSK · ಲೂಕನು 1:64
مراجع Treasury of Scripture Knowledge في ಕನ್ನಡ IRV.
ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.
¶ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.”
ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.
ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.