TSK

TSK · ಲೂಕನು 1:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ

ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.

ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.

¶ ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.

¶ ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.