TSK

TSK · ಲೂಕನು 10:15

مراجع Treasury of Scripture Knowledge في ಕನ್ನಡ IRV.

العودة إلى المقطع

ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.

ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.

¶ “ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.

¶ “ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”

ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಐಗುಪ್ತವೂ ಮತ್ತು ಅದರ ಸಮೂಹವೂ ಕತ್ತಿಗೆ ಒಪ್ಪಿಸಲ್ಪಟ್ಟಿದೆ.

ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು.

ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.

‹ಎಲೈ ಕಪೆರ್ನೌಮೇ›‹ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.›

‹ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.›

ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.