TSK

TSK · ಲೂಕನು 11:31

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

¶ ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.

ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.

ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.

¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.