TSK

TSK · ಲೂಕನು 11:35

مراجع Treasury of Scripture Knowledge في ಕನ್ನಡ IRV.

العودة إلى المقطع

ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.

ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!

ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?

¶ “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.

¶ ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.

ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.