¶ ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
TSK
TSK · ಲೂಕನು 11:40
مراجع Treasury of Scripture Knowledge في ಕನ್ನಡ IRV.
ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;
“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,
‹ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?›
¶ ‹“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.›
ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ.