TSK

TSK · ಲೂಕನು 11:42

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,

ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.

¶ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.

“ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.

ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?

¶ ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.›

‹ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.›

ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?