TSK

TSK · ಲೂಕನು 12:36

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು.

ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.

¶ ‹“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.›

‹ಅದು›‹ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ”› ಎಂದು ನಾನು ನಿಮಗೆ ಹೇಳುತ್ತಿದ್ದೇನೆ.

¶ ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.

ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.