TSK

TSK · ಲೂಕನು 12:56

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.

ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.

‹ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?›

‹“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.›

ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.