TSK

TSK · ಲೂಕನು 13:11

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.

ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.

ಯೇಸು ಅವನ ತಂದೆಯನ್ನು, ‹“ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?”› ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;

ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.

‹ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?”› ಎಂದು ಕೇಳಿದನು.

ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.

ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.