TSK

TSK · ಲೂಕನು 13:25

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

‹ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.›

¶ ‹“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?›

“ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.

ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.