TSK

TSK · ಲೂಕನು 13:35

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.

ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.

ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.

ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.

¶ ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.

ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!

¶ ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.

ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;

¶ ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ,

‹ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ”› ಎಂದನು.

ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.

‹ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.›

ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.