TSK

TSK · ಲೂಕನು 14:26

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು.

ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,

ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.

ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.

¶ ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.

‹ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.›

‹ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.›

ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ.

ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.