TSK

TSK · ಲೂಕನು 14:27

مراجع Treasury of Scripture Knowledge في ಕನ್ನಡ IRV.

العودة إلى المقطع

‹ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.›

¶ ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, ‹“ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.›

¶ ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.

¶ ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.

ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.