TSK

TSK · ಲೂಕನು 15:4

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.

ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.

¶ “‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.

“ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.”

¶ ‹“ನಿಮ್ಮಲ್ಲಿ›‹ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?›

ಅದೇನೆಂದರೆ, ‹“ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?›

‹ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.›

¶ ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.