TSK

TSK · ಲೂಕನು 15:7

مراجع Treasury of Scripture Knowledge في ಕನ್ನಡ IRV.

العودة إلى المقطع

ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.

‹ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ”› ಎಂದು ಅವರಿಗೆ ಉತ್ತರಕೊಟ್ಟನು.

‹ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.›

ಆಗ ಆತನು ಅವರಿಗೆ ಹೇಳಿದ್ದೇನಂದರೆ, ‹“ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.›

ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.