TSK

TSK · ಲೂಕನು 17:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

‹ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ›‹ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.›

‹ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು”› ಅಂದನು.

ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, ‹“ಯೋಹಾನನ ಮಗನಾದ ಸೀಮೋನನೇ,›‹ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?”› ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, ‹“ನನ್ನ ಕುರಿಮರಿಗಳನ್ನು ಮೇಯಿಸು”› ಎಂದು ಹೇಳಿದನು.

¶ ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.

¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.