TSK

TSK · ಲೂಕನು 17:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.

¶ ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.

ಅವನು ಅವರಿಗೆ, “ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.

ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.

¶ ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.

¶ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.

ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.

ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.