TSK

TSK · ಲೂಕನು 18:1

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?

ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು.

ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.

“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.

‹ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.›

ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.

ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.

ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.

ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.