TSK

TSK · ಲೂಕನು 18:24

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.

ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ; ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ.

ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.

ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?

¶ ಆಗ ಯೇಸು ತನ್ನ ಶಿಷ್ಯರಿಗೆ, ‹“ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, ‹“ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ”› ಎಂದು ಹೇಳಿದನು.

ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ.

¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?