ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.
TSK
TSK · ಲೂಕನು 18:9
مراجع Treasury of Scripture Knowledge في ಕನ್ನಡ IRV.
ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.
ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
‹ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.›
‹ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.›
ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ?
ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.
ಆದರೆ ಆತನು; ‹‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’”› ಹೇಳಿದನು.
ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.