TSK

TSK · ಲೂಕನು 19:10

مراجع Treasury of Scripture Knowledge في ಕನ್ನಡ IRV.

العودة إلى المقطع

ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.

‹ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.›

‹ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ›‹ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.›

ಅದಕ್ಕೆ ಯೇಸು, ‹“ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;›

¶ ‹“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?›

¶ ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.