ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
TSK
TSK · ಲೂಕನು 19:26
مراجع Treasury of Scripture Knowledge في ಕನ್ನಡ IRV.
ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ
ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.’ ಇದು ಕರ್ತನಾದ ಯೆಹೋವನ ನುಡಿ.
‹ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.›
‹ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು”› ಎಂದು ಹೇಳಿದನು.
‹ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ.›
¶ ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
‹ನೀನು ತಾಳ್ಮೆಯುಳ್ಳವನಾಗಿ›‹ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.›