TSK

TSK · ಲೂಕನು 20:37

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು.

ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.

ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.

‹ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ›‹‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’›