TSK

TSK · ಲೂಕನು 20:47

مراجع Treasury of Scripture Knowledge في ಕನ್ನಡ IRV.

العودة إلى المقطع

ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,

ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.

“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.

ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ. ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ.

‹ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.›

‹ಅಯ್ಯೋ, ಕಪಟಿಗಳಾದ›‹ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.›

‹ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು”› ಎಂದನು.

¶ ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, ‹“ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.›

ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ.

ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.