ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
TSK
TSK · ಲೂಕನು 20:7
مراجع Treasury of Scripture Knowledge في ಕನ್ನಡ IRV.
ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.
ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ. ನಾನು ಪ್ರಶ್ನೆ ಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ.
ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
¶ ಆ ಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆ ಮಾಡಿದನು, “ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮೂರ್ಖ ಕುರುಬನಂತೆ ನಟಿಸು.
ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;
¶ ಆಗ ಯೇಸುವು, ‹“ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು”› ಎಂದನು.
ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.