ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ
TSK
TSK · ಲೂಕನು 21:25
مراجع Treasury of Scripture Knowledge في ಕನ್ನಡ IRV.
ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.
ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.
ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.
¶ ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.
¶ “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.
ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.
¶ ‹“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.›
¶ ‹ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ;› ‹“‘ಸೂರ್ಯನು ಕತ್ತಲಾಗಿ ಹೋಗುವನು.›
¶ ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.