ಲೂಕನು 14:15
TSK
¶ ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
TSK
مراجع Treasury of Scripture Knowledge في ಕನ್ನಡ IRV.
¶ ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.
ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.
¶ ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.