ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.
TSK
TSK · ಲೂಕನು 22:70
مراجع Treasury of Scripture Knowledge في ಕನ್ನಡ IRV.
¶ ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
¶ ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
ಪಿಲಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, ‹“ನೀನೇ ಹೇಳಿದ್ದೀ”› ಎಂದು ಉತ್ತರಕೊಟ್ಟನು.
ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, ‹“ನೀನೇ ಹೇಳಿದ್ದೀ”› ಎಂದು ಉತ್ತರ ಕೊಟ್ಟನು.
ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
‹ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’›
ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.