TSK

TSK · ಲೂಕನು 23:14

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.

ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.

ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.

ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.

¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.