TSK

TSK · ಲೂಕನು 23:2

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.

ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.

ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.

ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.

¶ ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.

‹ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು›‹ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು”› ಎಂದು ಹೇಳಿದನು.

ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.

¶ ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.

ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು.

‹ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು”› ಎಂದು ಹೇಳಿದನು.

ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.

¶ ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.

ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;

¶ “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’

ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.