ಕೀರ್ತನೆಗಳು 38:11
TSK
ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.
TSK
مراجع Treasury of Scripture Knowledge في ಕನ್ನಡ IRV.
ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.
ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.
ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.
ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು.
¶ ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಆ ಗುಂಪಿನಲ್ಲಿ ಕೆಲವು ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿಗಾಗಿ ಗೋಳಾಡುತ್ತಾ ಇದ್ದರು.
ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು.