TSK

TSK · ಲೂಕನು 23:56

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.

ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;

ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.

ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,

¶ ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.