TSK

TSK · ಲೂಕನು 3:2

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.

ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.

¶ ಯೆಹೋವನು ಅಮಿತ್ತೈಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ,

¶ ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.

¶ ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, ‹“ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?›

“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.

ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.

ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.

ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.

ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.