TSK

TSK · ಲೂಕನು 4:1

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?

¶ ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.

ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.

¶ ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.

ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು,

¶ ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು

‹“ಕರ್ತನ ಆತ್ಮವು ನನ್ನ ಮೇಲೆ ಅದೆ,› ‹ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.› ‹ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ,› ‹ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ› ‹ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ›

ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.

ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.