TSK

TSK · ಲೂಕನು 4:16

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?

¶ ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು;

ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.

ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.

ಅದಕ್ಕೆ ಯೇಸು, ‹“ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.›

ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,