TSK

TSK · ಲೂಕನು 4:22

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.

ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.

ಅವನ ನುಡಿ ಮಧುರ, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.

¶ ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?

ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.

“ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.

ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.