TSK

TSK · ಲೂಕನು 4:23

مراجع Treasury of Scripture Knowledge في ಕನ್ನಡ IRV.

العودة إلى المقطع

ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.

‹ಎಲೈ ಕಪೆರ್ನೌಮೇ›‹ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.›

¶ ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.

¶ ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.

‹ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.›

ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,

ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.

“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?