TSK

TSK · ಲೂಕನು 4:25

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,

ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.

ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,

“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.

ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.

ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.