ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
TSK
TSK · ಲೂಕನು 4:35
مراجع Treasury of Scripture Knowledge في ಕನ್ನಡ IRV.
ಆತನು ಅವರಿಗೆ, ‹“ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?”› ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.
ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.
ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.
‹ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ.›
ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.