TSK

TSK · ಲೂಕನು 5:26

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”

ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.

ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.

ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.

ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.