TSK

TSK · ಲೂಕನು 7:13

مراجع Treasury of Scripture Knowledge في ಕನ್ನಡ IRV.

العودة إلى المقطع

ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.

ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.

ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.

‹“ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.›

ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, ‹“ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ”› ಅನ್ನಲು,

ಆ ಮಾತನ್ನು ಕೇಳಿ ಕರ್ತನು ಅವನಿಗೆ, ‹“ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.›

ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, ‹“ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ”› ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,

ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.

ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.

ಅಳುವವರು ಅಳದಂತೆಯೂ, ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಏನೂ ಇಲ್ಲದವರಂತೆಯೂ,

ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.