TSK

TSK · ಲೂಕನು 7:29

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.

‹ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು?› ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ‹ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

‹ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ”› ಅಂದನು.

ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.

ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

¶ ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.