‹ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು?› ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ‹ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
TSK
TSK · ಲೂಕನು 7:37
مراجع Treasury of Scripture Knowledge في ಕನ್ನಡ IRV.
¶ ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
‹ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ”› ಎಂದು ಅವರಿಗೆ ಉತ್ತರಕೊಟ್ಟನು.
ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು,
ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.
ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
¶ ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.
ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,
ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ?